ನವದೆಹಲಿ: 2014ರಿಂದ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿರುವ ‘ಕಪ್ಪು ಪತ್ರ’ವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಇಲ್ಲಿ ಬಿಡುಗಡೆ ಮಾಡಿದರು.

’10 ವರ್ಷಗಳ ಅನ್ಯಾಯ ಕಾಲ’ ಎಂದು ಈ ‘ಕಪ್ಪು ಪತ್ರ’ಕ್ಕೆ ಹೆಸರಿಡಲಾಗಿದೆ.
.ರಾಜ್ಯಸಭೆ: ಕೈಬಿಟ್ಟ ಭಾಷಣದ ತುಣುಕುಗಳನ್ನು ಕಡತಕ್ಕೆ ಸೇರಿಸಲು ಖರ್ಗೆ ಆಗ್ರಹ.
ಯುಪಿಎ ಸರ್ಕಾರದ ಅವಧಿಯ ಶ್ವೇತ ಪತ್ರವನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ‘ಕಪ್ಪು ಪತ್ರ’ ಬಿಡುಗಡೆಗೊಳಿಸಿದೆ.

‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಿದರೂ, ರಾಜ್ಯಗಳು ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತದೆ’ ಎಂದು ‘ಕಪ್ಪು ಪತ್ರ' ಬಿಡುಗಡೆ ವೇಳೆ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
.ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯ ಬುಡಮೇಲು: ಖರ್ಗೆ.
ಹಣದುಬ್ಬರ ಹೆಚ್ಚಳವಾಗಿದೆ. ಕಾಂಗ್ರೆಸ್ ಇತಿಹಾಸವನ್ನು ಕೆದಕುವುದರಿಂದ ಏನೂ ಬದಲಾವಣೆ ಆಗದು ಎಂದು ಅವರು ಹೇಳಿದರು.

ಈ ವೇಳೆ ಕಾಂಗ್ರೆಸ್ ನಾಯಕರಾದ ಪವನ್ ಖೇರಾ, ರಾಜ್ಯಸಭಾ ಸಂಸದ ನಾಸಿರ್ ಹುಸೇನ್ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಇದ್ದರು.
.ಮೋದಿ ಸರ್ಕಾರದ ನಿರ್ಲಕ್ಷ್ಯ; ಭರ್ತಿಯಾಗದ 30 ಲಕ್ಷ ಸರ್ಕಾರಿ ಉದ್ಯೋಗಗಳು: ಖರ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.