ಮುಂಬೈ(ಮಹಾರಾಷ್ಟ್ರ): ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕನಿಷ್ಠ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ಬೆಳಿಗ್ಗೆ ಠಾಣೆ ಜಿಲ್ಲೆಯ ದಿವಾ– ಕೋಪರ್ ರೈಲು ಮಾರ್ಗದ ನಡುವೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 9:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಈ ಸಮಯದಲ್ಲಿ ರೈಲ್ವೆ ನಿಲ್ದಾಣದಲ್ಲಿ ಸಾಮಾನ್ಯವಾಗಿ ಜನದಟ್ಟಣೆ ಇರುತ್ತದೆ. ಇವತ್ತು ಸಹ ಕಸರಾ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನ ತುಂಬ ಜನ ಕಿಕ್ಕಿರಿದು ತುಂಬಿದ್ದು, ಅನೇಕರು ರೈಲಿನ ಬಾಗಿಲ ಬಳಿ ತೂಗಾಡುತ್ತಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರೈಲು ಚಲಿಸುತ್ತಿದ್ದಂತೆ ಕನಿಷ್ಠ 10 ಪ್ರಯಾಣಿಕರು ಕೆಳಗೆ ಬಿದ್ದರು. ತಕ್ಷಣ ರೈಲಿನ ಕಾವಲುಗಾರನೊಬ್ಬ ಘಟನೆಯ ಬಗ್ಗೆ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೆಳಗೆ ಬಿದ್ದ ಎಲ್ಲಾ ಪ್ರಯಾಣಿಕರನ್ನು ಕಲ್ವಾದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಲ್ಲಿ ಐವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದರು. ಮೃತರು 30 ರಿಂದ 35 ವರ್ಷ ವಯಸ್ಸಿನವರು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.