ಹೈದರಾಬಾದ್: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ವೀಲಿನ ಮಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಗ್ರಹಿಸಿದ್ದಾರೆ.

ಪಹಲ್ಗಾಮ್ ದಾಳಿ ಖಂಡಿಸಿ ಹೈದರಾಬಾದ್ನಲ್ಲಿ ನಿನ್ನೆ ರಾತ್ರಿ ನಡೆದ ಮೊಂಬತ್ತಿ ಬೆಳಕಿನ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

1971 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಬಗ್ಗುಬಡಿದು ವಾಜಪೇಯಿ ಸೇರಿದಂತೆ ಹಲವರಿಂದ ದುರ್ಗೆ ಎಂಬ ಬಿರುದು ಪಡೆದಿದ್ದರು. ಅಂತಹ ಇಚ್ಚಾಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೋರಿಸುವ ಸಮಯ ಬಂದಿದೆ ಎಂದು ಅವರು ಹೇಳಿದರು.

ಈಗ ತಿರುಗೇಟು ನೀಡುವ ಸಮಯ ಬಂದಿದೆ. ನಾವೆಲ್ಲ ನಿಮ್ಮ ಜೊತೆ ಇದ್ದೇವೆ. 140 ಕೋಟಿ ಭಾರತೀಯರು ನಿಮ್ಮ ಜೊತೆ ಇದ್ದಾರೆ. ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲು ನೀವು ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲ ಇದೆ ಎಂದು ಅವರು ಹೇಳಿದರು.

ಯಾರೇ ಆದರೂ ರಾಜಕೀಯ ಮಾಡುವ ಸಮಯ ಇದಲ್ಲ. ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದವರಿಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ, ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪಹಲ್ಗಾಮ್ನಲ್ಲಿ ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾಶ್ಮೀರದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.
.ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಕೋಚ್ ಗಂಭೀರ್ಗೆ ಕೊಲೆ ಬೆದರಿಕೆ.ಪಹಲ್ಗಾಮ್ ಭಯೋತ್ಪಾದಕ ದಾಳಿ: ನವವಿವಾಹಿತ ನೌಕಾಪಡೆ ಅಧಿಕಾರಿ ಹುತಾತ್ಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.