ಮಧುಬನಿ: ಬಿಹಾರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ₹13,500 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಅಮೃತ ಭಾರತ ಎಕ್ಸ್ಪ್ರೆಸ್, ನಮೋ ಭಾರತ್ ರ್ಯಾಪಿಡ್ ಸೇರಿ ನಾಲ್ಕು ಹೊಸ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ.

ಅಲ್ಲದೇ, ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ಹಥುವಾದಲ್ಲಿ ಸುಮಾರು ₹340 ಕೋಟಿ ಮೌಲ್ಯದ ಎಲ್ಪಿಜಿ ಬಾಟ್ಲಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ವಿದ್ಯುತ್ ವಲಯದಲ್ಲಿ ₹5,030 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

ಇದೇ ವೇಳೆ, ಪಿಎಂಎವೈ-ಜಿ ಯೋಜನೆಯಡಿ 15 ಲಕ್ಷ ಹೊಸ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದ ಅವರು ದೇಶದಾದ್ಯಂತ 10 ಲಕ್ಷ ಪಿಎಂಎವೈ-ಜಿ ಫಲಾನುಭವಿಗಳಿಗೆ ಕಂತುಗಳನ್ನು ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.