ನವದೆಹಲಿ: ಪಾಕಿಸ್ತಾನದಿಂದ ಬರುವ ಎಲ್ಲಾ ವರ್ಗದ ಮೇಲ್ಗಳು ಮತ್ತು ಪಾರ್ಸೆಲ್ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಸಂವಹನ ಸಚಿವಾಲಯ ತಿಳಿಸಿದೆ.

ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆಮದಾಗುವ ಎಲ್ಲಾ ಸರಕುಗಳ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ನಿರ್ಬಂಧ ಹೇರಿರುವುದಾಗಿ ವಾಣಿಜ್ಯ ಸಚಿವಾಲಯವು ಇಂದು (ಶನಿವಾರ) ಬೆಳಿಗ್ಗೆ ಅಧಿಸೂಚನೆ ಹೊರಡಿಸಿತ್ತು.

ವಿದೇಶಿ ವ್ಯಾಪಾರ ನೀತಿ 2023ರ ಅನ್ವಯ ಈ ಘೋಷಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ. ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ನೀತಿಯ ಹಿತದೃಷ್ಠಿಯಿಂದ ಈ ನಿರ್ಬಂಧ ಹೇರಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶಕರು ತಿಳಿಸಿದ್ದಾರೆ.

ಈ ನಿಷೇಧಕ್ಕೆ ಯಾವುದೇ ವಿನಾಯಿತಿ ಬೇಕಿದ್ದರೆ ಭಾರತ ಸರ್ಕಾರದ ಅನುಮೋದನೆ ಪಡೆಯಬೇಕಾಗುತ್ತದೆ.

‘ಪಾಕಿಸ್ತಾನದಲ್ಲಿ ತಯಾರಾಗುವ, ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಹಾಗೂ ಪರೋಕ್ಷ ಆಮದು ಅಥವಾ ಸಾಗಣೆ, ಮುಕ್ತ ಹಾಗೂ ಬೇರೆ ರೀತಿಯಲ್ಲಿ ಅನುಮತಿಸಿದ್ದರೂ ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗುತ್ತದೆ’ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕ್ ಮೇಲೆ ಭಾರತ ಹಲವು ನಿರ್ಬಂಧಗಳನ್ನು ವಿಧಿಸಿತ್ತು. ಅದರ ಮುಂದುವರಿದ ಭಾಗವಾಗಿ ಈ ಘೋಷಣೆ ಹೊರಬಿದ್ದಿದೆ.
.Pahalgam Terror Attack: ಚೀನಾದಲ್ಲಿನ ಭಾರತೀಯ ರಾಜತಾಂತ್ರಿಕರಿಂದ ಸಂತಾಪ.Pahalgam Terror Attack: ಪಾಕಿಸ್ತಾನದಿಂದ ಆಮದಾಗುವ ಸರಕುಗಳಿಗೆ ಭಾರತ ನಿರ್ಬಂಧ.pahalgam | ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸಿ: ಭಾರತ–ಪಾಕ್ಗೆ ಅಮೆರಿಕ ಮನವಿ.Pahalgam Attack | ಸೇನಾ ಕಮಾಂಡರ್ ವಜಾ ಆಗಿಲ್ಲ: ಕೇಂದ್ರ ಸರ್ಕಾರ.ಅಪ್ರಚೋದಿತ ದಾಳಿ: ಪಾಕ್ಗೆ ಭಾರತ ಎಚ್ಚರಿಕೆ.Pahalgam Attack ಪಕ್ಷದ ನಿಲುವಿಗೆ ಬದ್ಧವಾಗಿರಿ; ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.