ತಿರುವನಂತಪುರ: ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಜನೆಯು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಇದು ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ತಿರುವನಂತಪುರದಲ್ಲಿ ನಡೆದ ಮಾತೃಭೂಮಿ ಅಂತರರಾಷ್ಟ್ರೀಯ ಅಕ್ಷರಗಳ ಉತ್ಸವದ ಆರನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ’ ಎಂದು ತಿಳಿಸಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆಯ ಮೂಲಕ ಚುನಾವಣೆ ನಡೆಸಿದಾಗ ಪಕ್ಷಾಂತರ ಅಥವಾ ಅವಿಶ್ವಾಸ ನಿರ್ಣಯದಿಂದಾಗಿ ರಾಜ್ಯ ಸರ್ಕಾರ ಪತನವಾದರೆ, ಮುಂದಿನ ಲೋಕಸಭೆ ಚುನಾವಣೆ ನಡೆಯುವವರೆಗೆ ಆ ನಿರ್ದಿಷ್ಟ ರಾಜ್ಯವು ಕಾಯಬೇಕಾಗುತ್ತದೆ. ಇದು 174ನೇ ವಿಧಿಯನ್ನು ದುರ್ಬಲಗೊಳಿಸುತ್ತದೆ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಉದಯನಿಧಿ ಹೇಳಿದ್ದಾರೆ

ಕೇಂದ್ರ ಬಜೆಟ್ನಲ್ಲಿ ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದ್ದಾರೆ.
.ಮತಗಟ್ಟೆ ಸಮೀಕ್ಷೆಗಳಲ್ಲಿ ನಂಬಿಕೆಯಿಲ್ಲ, ಜನಾದೇಶಕ್ಕಾಗಿ ಕಾಯೋಣ: ಡಿ.ಕೆ.ಶಿವಕುಮಾರ್.ಮೋದಿ-ಟ್ರಂಪ್ ಉತ್ತಮ ಸ್ನೇಹಿತರಾದರೇ ಭಾರತೀಯರ ಕೈಗಳಿಗೆ ಕೋಳವೇಕೆ?: ಪ್ರಿಯಾಂಕಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.