ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕಾಶ್ಮೀರಕ್ಕೆ ಆಗಮಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 22ರಂದು ನಡೆದ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ರಾಹುಲ್ ಗಾಂಧಿ ಬಾದಾಮಿಬಾಗ್ ಕಂಟೋನ್ಮೆಂಟ್ನಲ್ಲಿರುವ ಸೇನಾ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ದಾಳಿಯಲ್ಲಿ 28 ಜನರು ಸಾವಿಗೀಡಾಗಿದ್ದರು, ಅದರಲ್ಲಿ ಹೆಚ್ಚಿನವರು ಪ್ರವಾಸಿಗರು.

ಪಕ್ಷದ ನಾಯಕರು, ವ್ಯಾಪಾರ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳು ಸೇರಿದಂತೆ ವಿವಿಧ ವಲಯದ ಜನರನ್ನೂ ಭೇಟಿ ಮಾಡಲಿದ್ದಾರೆ ಎಂದು ನಾಯಕರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ರಾಹುಲ್ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ದಾಳಿಯ ನಂತರ ಗುರುವಾರ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದರು.

ಭೀಕರ ಭಯೋತ್ಪಾದಕ ದಾಳಿಯ ಕುರಿತು ಪಕ್ಷಗಳಿಗೆ ಮಾಹಿತಿ ನೀಡಲು ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿಯೂ ಅವರು ಭಾಗವಹಿಸಿದ್ದರು.
.Pahalgam Terror Attack: ಇಬ್ಬರು ಉಗ್ರರ ಮನೆ ಧ್ವಂಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.