ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 26ರವರೆಗೆ ವಿಸ್ತರಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ಅಧಿಕೃತ ರಹಸ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳನ್ನು ಆಲಿಸಲು ಹೊಸದಾಗಿ ರಚಿಸಲಾದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಬುಲ್ ಹಸನತ್ ಜುಲ್ಕರ್ನೈನ್ ಅವರು ಕಾರಾಗೃಹದಲ್ಲೇ ಇಮ್ರಾನ್ ಅವರ ವಿಚಾರಣೆ ನಡೆಸಿದ ಬಳಿಕ ಈ ಆದೇಶ ನೀಡಿದ್ದಾರೆ.

ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನು ಸದ್ಯ ಜೈಲಿನಲ್ಲಿರಿಸಲಾಗಿದೆ. ಭದ್ರತೆ ಕಾರಣದಿಂದಾಗಿ ಜೈಲಿನಲ್ಲಿಯೇ ವಿಚಾರಣೆ ನಡೆಸಲು ಗೃಹ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದರು. ಇದಕ್ಕೆ ಕಾನೂನು ಸಚಿವಾಲಯ ಅನುಮೋದನೆ ನೀಡಿತ್ತು.

ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾಹ್ ಮಹಮೂದ್ ಖುರೇಷಿ ಅವರಿಗೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಕಾರಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ಬುಧವಾರ ಹಾಜರುಪಡಿಸಲಾಯಿತು. ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯವು ಈ ತಿಂಗಳ 26ರವರೆಗೆ ಮತ್ತೆ ವಿಸ್ತರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.