ನವದೆಹಲಿ: ಅಮೆರಿಕದ ಆಡಳಿತದಲ್ಲಿ ಭಾರಿ ಪ್ರಭಾವ ಹೊಂದಿರುವ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಇಲಾನ್ ಮಸ್ಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ಚರ್ಚಿಸಿದ್ದಾರೆ.

ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸೇರಿದಂತೆ ಬೃಹತ್ ಉದ್ಯಮ ಹೊಂದಿರುವ ಮಸ್ಕ್ ಜೊತೆ ಮಾತನಾಡಿದ ಬಳಿಕ ಎಕ್ಸ್ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.

ಇಲಾನ್ ಮಸ್ಕ್ ಅವರೊಂದಿಗೆ ಮಾತನಾಡಿದೆ. ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯ ವೇಳೆ ಚರ್ಚಿಸಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದೆವು. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಮೋದಿ ಬರೆದುಕೊಂಡಿದ್ದಾರೆ.

ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಮಸ್ಕ್ ಅವರನ್ನು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಸರ್ಕಾರಿ ದಕ್ಷತೆ ಇಲಾಖೆಯನ್ನು (ಡಿಒಜಿಇ) ಮುನ್ನಡೆಸುತ್ತಿರುವ ಅವರು, ಸರ್ಕಾರಿ ವೆಚ್ಚವನ್ನು ಕಡಿತಗೊಳಿಸುವ ಮತ್ತು ಫೆಡರಲ್ ಕಾರ್ಯಪಡೆಯನ್ನು ತಗ್ಗಿಸುವ ಗುರಿಯನ್ನು ಹೊಂದಿದ್ದಾರೆ.

ದೆಹಲಿ, ಮುಂಬೈನಲ್ಲಿ ಮಾರಾಟ ಮಳಿಗೆ ತೆರೆಯಲು ಟೆಸ್ಲಾ ತಯಾರಿ ನಡೆಸಿದೆ. ಮಸ್ಕ್ ಅವರ ‘ಸ್ಟಾರ್ಲಿಂಕ್’ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಒದಗಿಸುತ್ತಿದೆ ‘ಸ್ಟಾರ್ಲಿಂಕ್’ ಕಂಪನಿಯು ಏರ್ಟೆಲ್, ರಿಲಯನ್ಸ್ ಜಿಯೊ ಜತೆ ಒಪ್ಪಂದ ಮಾಡಿಕೊಂಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.