ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂಗೆ ಎರಡು ದಿನ ಭೇಟಿ ನೀಡಲಿರುವ ಪ್ರಧಾನಿ ಮೋದಿ

Published 8 ಮಾರ್ಚ್ 2024, 5:08 IST
Last Updated 8 ಮಾರ್ಚ್ 2024, 5:08 IST
ಅಕ್ಷರ ಗಾತ್ರ

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಶುಕ್ರವಾರ ಮಧ್ಯಾಹ್ನ ಅಸ್ಸಾಂನ ತೇಜ್‌ಪುರಕ್ಕೆ ಆಗಮಿಸಲಿದ್ದಾರೆ.

ಶನಿವಾರ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ₹ 18 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಲಿದ್ದು ರಾತ್ರಿ ಅಲ್ಲಿಯೇ ತಂಗಲಿದ್ದಾರೆ. ನಾಳೆ ಬೆಳಗ್ಗೆ ಜೀಪ್‌ ಹಾಗೂ ಆನೆ ಸಫಾರಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಸಫಾರಿಯ ನಂತರ, ಮೋದಿ ಅವರು ಅರುಣಾಚಲಪ್ರದೇಶಕ್ಕೆ ತೆರಳಲಿದ್ದು, ಅಲ್ಲಿ ಅವರು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಮತ್ತೆ ಅಸ್ಸಾಂಗೆ ಆಗಮಿಸಿ 125 ಅಡಿ ಎತ್ತರದ ಶೌರ್ಯ ಪ್ರತಿಮೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸ್ಥಳದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT