ನವದೆಹಲಿ: ಭಾರತದ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ಆರ್ಟಿಎಸ್) ಕಾರಿಡಾರ್ ಶುಕ್ರವಾರ (ಅ.20) ಉದ್ಘಾಟನೆಗೊಳ್ಳಲಿದೆ. ಭಾರತದ ಮೊದಲ ಇಂಟರ್ಸಿಟಿ ‘ರ್ಯಾಪಿಡ್ಎಕ್ಸ್’ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಿದ್ದಾರೆ.

ಸಾಹಿಬಾಬಾದ್ನಲ್ಲಿ ಸಾರ್ವಜನಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ದೆಹಲಿ-ಗಾಜಿಯಾಬಾದ್-ಮೀರತ್ ಆರ್ಆರ್ಟಿಎಸ್ ಕಾರಿಡಾರ್ನ ಮೊದಲ 17 ಕಿ.ಮೀ ದೂರದ ವಿಭಾಗವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಮೊದಲ ಹಂತದಲ್ಲಿ ಈ ರೈಲು ಸಾಹಿಬಾಬಾದ್, ಗಾಜಿಯಾಬಾದ್ ಗುಲ್ಧರ್, ದುಹೈ ಮತ್ತು ದುಹೈ ಡಿಪೋ ಸೇರಿದಂತೆ ಐದು ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸಲಿದೆ. ಎನ್ಸಿಆರ್ನಲ್ಲಿ ಒಟ್ಟು 8 ಆರ್ಆರ್ಟಿಎಸ್ ಕಾರಿಡಾರ್ಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಅವುಗಳಲ್ಲಿ ಮೂರು ಕಾರಿಡಾರ್ಗಳನ್ನು ದೆಹಲಿ- ಘಾಜಿಯಾಬಾದ್-ಮೀರತ್ ಕಾರಿಡಾರ್ ಸೇರಿದಂತೆ ಹಂತ-1 ರಲ್ಲಿ ಕಾರ್ಯಗತಗೊಳಿಸಲು ನಿರ್ಧರಿಸಲಾಗಿದೆ.

ದೆಹಲಿ-ಗಾಜಿಯಾಬಾದ್-ಮೀರತ್ ಆರ್ಆರ್ಟಿಎಸ್ ಕಾರಿಡಾರ್ನ 17 ಕಿ.ಮೀ ಆದ್ಯತೆಯ ಮಾರ್ಗವು ಉದ್ಘಾಟನೆಗೊಳ್ಳಲಿದ್ದು, ಅದು ಸಾಹಿಬಾಬಾದ್ನಿಂದ ದುಹೈ ಡಿಪೋಗೆ ಗಾಜಿಯಾಬಾದ್, ಗುಲ್ಧಾರ್ ಮತ್ತು ದುಹೈ ನಿಲ್ದಾಣಗಳನ್ನು ಸಂಪರ್ಕಿಸುತ್ತದೆ. ದೆಹಲಿ-ಘಾಜಿಯಾಬಾದ್-ಮೀರತ್ ಕಾರಿಡಾರ್ಗೆ ಪ್ರಧಾನ ಮಂತ್ರಿ ಮೋದಿ 2019ರ ಮಾರ್ಚ್ 8ರಂದು ಅಡಿಪಾಯ ಹಾಕಿದ್ದರು. ದೆಹಲಿ-ಗಾಜಿಯಾಬಾದ್-ಮೀರತ್ ಆರ್ಆರ್ಟಿಎಸ್ ಅನ್ನು ₹30 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.