ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೈನಲ್ಲಿ ಜಾಗತಿಕ ಹವಾಮಾನ ಶೃಂಗ: ಪ್ರಧಾನಿ ಮೋದಿ ಭಾಗಿ

Published 27 ನವೆಂಬರ್ 2023, 3:23 IST
Last Updated 27 ನವೆಂಬರ್ 2023, 3:23 IST
ಅಕ್ಷರ ಗಾತ್ರ

ನವದೆಹಲಿ: ಜಾಗತಿಕ ಹವಾಮಾನ ಕ್ರಿಯಾ ಶೃಂಗ‌ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು 2 ದಿನ (ನ.30ರಿಂದ ಡಿ.1) ದುಬೈಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮತ್ತು ಅಬುಧಾಬಿಯ ದೊರೆ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಆಹ್ವಾನದ ಮೇರೆಗೆ ಮೋದಿ ಶೃಂಗ‌ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಎಂಇಎ ಹೇಳಿದೆ.

ಯುಎಇ ಅಧ್ಯಕ್ಷತೆಯಲ್ಲಿ ನ.28 ರಿಂದ ಡಿ.12 ರವರೆಗೆ ಸಭೆ ನಡೆಯಲಿದೆ. ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT