ನವದೆಹಲಿ: ದೆಹಲಿಯ ಮೋತಿ ನಗರದ ಬಿಜೆಪಿ ಶಾಸಕ ಹರೀಶ್ ಖುರಾನಾ ಅವರು ತಮ್ಮ ಎರಡು ತಿಂಗಳ ಸಂಬಳವನ್ನು ಪಂಜಾಬ್ನ ಪ್ರವಾಹದಲ್ಲಿ ಸಿಲುಕಿದ ಸಂತ್ರಸ್ತರ ನೆರವಿಗೆ ನೀಡುತ್ತಿರುವ ಬಗ್ಗೆ ಹೇಳಿದ್ದಾರೆ.

ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಪುತ್ರ ಹರೀಶ್ ಖುರಾನಾ ಅವರು, ಪಂಜಾಬ್ನಲ್ಲಿ ಪ್ರವಾಹದ ಭೀತಿಯಲ್ಲಿ ಸಿಲುಕಿದವರಿಗೆ ₹2 ಲಕ್ಷ ರೂಪಾಯಿಗಳನ್ನು ದಾನ ಮಾಡಲು ಮುಂದಾಗಿದ್ದಾರೆ.
.ಪಂಜಾಬ್ನಲ್ಲಿ ಪ್ರವಾಹ: ವಿಶ್ವವಿದ್ಯಾಲಯಗಳಲ್ಲಿ ಸೆಪ್ಟೆಂಬರ್ 3ರವರೆಗೆ ರಜೆ ಘೋಷಣೆ.
ಪಂಜಾಬ್ನಲ್ಲಿ ಸುಮಾರು 1000 ಗ್ರಾಮಗಳು ಪ್ರವಾಹದಲ್ಲಿ ಮುಳುಗಿವೆ. ನನ್ನ ಪಂಜಾಬಿ ಸಹೋದರ ಸಹೋದರಿಯರಿಗೆ ಸಾಧ್ಯವಾದಷ್ಟು ನೆರವು ನೀಡುವುದು ನನ್ನ ಕರ್ತವ್ಯ ಎಂದು ಶಾಸಕ ಹರೀಶ್ ಖುರಾನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
.ಪ್ರವಾಹ ಸಂತ್ರಸ್ತರಿಗೆ ಬಿತ್ತನೆ ಬೀಜ ವಿತರಿಸಿದ ಪಂಜಾಬ್ ರೈತರು.
ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಮತ್ತು ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಪಂಜಾಬ್ನಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.