ಚಂಡೀಗಢ: ಗುಜರಾತ್ನ ಜಲಂಧರ್ನಲ್ಲಿ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಗ್ಯಾಂಗ್ಸ್ಟರ್ ಭಗವಾನ್ ಪುರಿಯಾ ಗ್ಯಾಂಗ್ನ ಮೂವರು ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್, ‘ಜಲಂಧರ್ ಕಮಿಷನರೇಟ್ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಗ್ಯಾಂಗ್ಸ್ಟರ್ ಭಗವಾನ್ ಪುರಿಯಾ ಗ್ಯಾಂಗ್ನ ಮೂವರು ಸಹಚರರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.

ಶೋಧ ಕಾರ್ಯಾಚರಣೆಯ ವೇಳೆ ಗ್ಯಾಂಗ್ಸ್ಟರ್ನ ಸಹಚರರು ಗುಂಡಿನ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಒಟ್ಟು15 ಸುತ್ತುಗಳ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಂಧಿತ ಸಹಚರರಿಂದ ಆರು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದವ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.