ನವದೆಹಲಿ: 'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಅಲ್ಲ, ಭಾರತದ ಆತ್ಮ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಕುರಿತು ಮಾತನಾಡಿದ್ದಾರೆ.
.ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ದಿಗ್ವಿಜಯ್ಗೆ ತರೂರ್ ಬೆಂಬಲ.ಜನ ಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಬಿಜೆಪಿ: ಖರ್ಗೆ ವಾಗ್ದಾಳಿ.
'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ. ಬದಲಾಗಿ ದುರ್ಬಲ, ವಂಚಿತ ಮತ್ತು ಶ್ರಮಿಕರೊಂದಿಗೆ ನಿಂತಿರುವ ಭಾರತದ ಆತ್ಮದ ಧ್ವನಿಯಾಗಿದೆ' ಎಂದು ರಾಹುಲ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲೂ ರಾಹುಲ್ ಪೋಸ್ಟ್ ಮಾಡಿದ್ದು, 'ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಂವಿಧಾನಕ್ಕೆ ಅಡಿಪಾಯ ಹಾಕಿಕೊಟ್ಟ, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳನ್ನು ಬಲಪಡಿಸಿದ ಮಹಾನ್ ತ್ಯಾಗಿಗಳಿಗೆ ನಾವು ಗೌರವ ನಮನ ಸಲ್ಲಿಸುತ್ತೇವೆ' ಎಂದು ಬರೆದುಕೊಂಡಿದ್ದಾರೆ.

'ಸತ್ಯಕ್ಕಾಗಿ ಮತ್ತು ದ್ವೇಷ, ಅನ್ಯಾಯ, ಸರ್ವಾಧಿಕಾರದ ವಿರುದ್ಧ ಸಂವಿಧಾನವನ್ನು ರಕ್ಷಿಸಲು ಇನ್ನಷ್ಟು ಪ್ರಬಲವಾಗಿ ಹೋರಾಡುವ ಸಂಕಲ್ಪವನ್ನು ಹೊಂದಿದ್ದೇವೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.