ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿಪಕ್ಷಗಳ ಇತರ ನಾಯಕರ ಜತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಸೋಮವಾರ ಭೇಟಿಯಾಗಿ ಚರ್ಚಿಸಿದರು.

ಲೋಕಸಭೆ ದಿನದ ಮಟ್ಟಿಗೆ ಮುಂದೂಡಿದ ಬೆನ್ನಲ್ಲೇ ರಾಹುಲ್ ಅವರು, ಸ್ಪೀಕರ್ ಅವರನ್ನು ಭೇಟಿ ಮಾಡಿ ಸದನದಲ್ಲಿ ತಾವು ಪ್ರಸ್ತಾಪಿಸಲು ಬಯಸಿರುವ ವಿಷಯಗಳ ಕುರಿತು ಮಾಹಿತಿ ನೀಡಿದರು.

ವಿಪಕ್ಷಗಳ ಎಂಟು ಸಂಸದರ ಅಮಾನತು, ಮಹಿಳಾ ಸಂಸದರ ವಿರುದ್ಧ ಹೊರಿಸಲಾದ ಆರೋಪಗಳು ಸೇರಿದಂತೆ ಕೆಲ ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶ ನೀಡುವಂತೆ ಅವರು ಈ ವೇಳೆ ತಿಳಿಸಿದರು ಎಂದು ಮೂಲಗಳು ಹೇಳಿವೆ.

ರಾಹುಲ್ ಅವರ ಜತೆಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ಡಿಎಂಕೆ ನಾಯಕ ಟಿ.ಆರ್.ಬಾಲು, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.