ನವದೆಹಲಿ: ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸಿರುವ ‘ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ.

ತಿದ್ದುಪಡಿಯ ಬಳಿಕ ಕಾಯ್ದೆಯ ಕೆಲ ನಿಬಂದನೆಗಳು ಅಸ್ಪಷ್ಟವಾಗಿವೆ. ಜೊತೆಗೆ, ವಾಕ್ ಮತ್ತು ಧಾರ್ಮಿಕ ಪ್ರಚಾರದ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಹಿರಿಯ ವಕೀಲ ಎಸ್. ಮುರಳೀಧರನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆಗೆ ಮುಖ್ಯ ನ್ಯಾಯಮುರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಒಪ್ಪಿಗೆ ನೀಡಿದೆ.

ಬಾಕಿ ಉಳಿದಿರುವ ಇತರ ಅರ್ಜಿಗಳೊಂದಿಗೆ ಮೇ 13ರಂದು ವಿಚಾರಣೆ ನಡೆಸುವುದಾಗಿ ಖನ್ನಾ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.