ನವದೆಹಲಿ: ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣಕ್ಕೆ ಚುನಾವಣಾ ಆಯೋಗವು ಫೆಬ್ರುವರಿ 7ರಂದು ನೀಡಿರುವ ‘ಎನ್‌ಸಿಪಿ – ಶರದ್‌ಚಂದ್ರ ಪವಾರ್’ ಹೆಸರನ್ನು ಮುಂದಿನ ಆದೇಶದವರೆಗೆ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಅಜಿತ್ ಪವಾರ್ ಬಣವನ್ನು ನಿಜವಾದ ಎನ್‌ಸಿಪಿ ಎಂದು ಚುನಾವಣಾ ಆಯೋಗವು ಮಾನ್ಯ ಮಾಡಿದೆ. ಇದನ್ನು ಪ್ರಶ್ನಿಸಿ ಶರದ್ ಪವಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶರದ್ ಪವಾರ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠವು ಅಜಿತ್ ಪವಾರ್ ಬಣಕ್ಕೆ ಸೂಚನೆ ನೀಡಿದೆ.

ಪಕ್ಷಕ್ಕೆ ಚಿಹ್ನೆಯನ್ನು ಕೋರಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಶರದ್ ಪವಾರ್ ಅವರು ಸ್ವತಂತ್ರರಿದ್ದಾರೆ ಎಂದು ಪೀಠ ಹೇಳಿದೆ. ಅವರು ಅರ್ಜಿ ಸಲ್ಲಿಸಿದ ಒಂದು ವಾರದಲ್ಲಿ ಚಿಹ್ನೆ ನೀಡಬೇಕು ಎಂದು ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.