ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಿತ್ ಬಣವೇ ನಿಜವಾದ ಎನ್‌ಸಿಪಿ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶರದ್ ಪವಾರ್

Published 13 ಫೆಬ್ರುವರಿ 2024, 6:51 IST
Last Updated 13 ಫೆಬ್ರುವರಿ 2024, 6:51 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಮನವಿ ಸಲ್ಲಿಸಿದ್ದಾರೆ.

ಶರದ್ ಪವಾರ್ ಬಣವು ಈ ಸಂಬಂಧ ಯಾವುದೇ ಅರ್ಜಿ ಸಲ್ಲಿಸಿದರೂ ಅದರ ವಿಚಾರಣೆಗೂ ಮುನ್ನ ನಮ್ಮ ವಾದ ಆಲಿಸಬೇಕೆಂದು ಅಜಿತ್ ಪವಾರ್ ಬಣವು ವಕೀಲ ಅಭಿಕಲ್ಪ್ ಪ್ರತಾಪ್ ಸಿಂಗ್ ಮೂಲಕ ಕೇವಿಯಟ್ ಸಲ್ಲಿಸಿದೆ.

ಫೆಬ್ರುವರಿ 6 ರಂದು ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದು ಘೋಷಿಸಿತ್ತು. ಆ ಮೂಲಕ, ಪಕ್ಷದ ಸಂಸ್ಥಾಪಕ ಶರದ್ ಪವಾರ್‌ ಅವರಿಗೆ ದೊಡ್ಡ ಹಿನ್ನಡೆಯಾಗಿತ್ತು.

ಅಜಿತ್ ಪವಾರ್ ಅವರ ಎನ್‌ಸಿಪಿಗೆ ಚುನಾವಣಾ ಆಯೋಗವು ಗಡಿಯಾರದ ಚಿಹ್ನೆ ನೀಡಿದೆ.

ಪಕ್ಷದ ಸಂವಿಧಾನದ ಗುರಿ, ಉದ್ದೇಶ ಮತ್ತು ಶಾಸಕರ ಸಂಖ್ಯೆಯನ್ನು ಆಧರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆಯೋಗ ತಿಳಿಸಿತ್ತು.

ಕಳೆದ ವರ್ಷದ ಜುಲೈನಲ್ಲಿ ಎನ್‌ಸಿಪಿ ಇಬ್ಭಾಗವಾಗಿತ್ತು. ಅಜಿತ್‌ ಪವಾರ್ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಶಾಸಕರು ಏಕನಾಥ ಶಿಂದೆ ನೇತೃತ್ವದ ಬಿಜೆಪಿ–ಶಿವಸೇನಾ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಅಜಿತ್‌ ಪವಾರ್‌ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದರು. ಆ ಬಳಿಕ ಎನ್‌ಸಿಪಿ ಸಂಸ್ಥಾಪಕ ಶರದ್‌ ಪವಾರ್‌ ಮತ್ತು ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಬಣಗಳ ನಡುವೆ ನಿರಂತರ ವಾಕ್ಸಮರ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT