ನಾಗ್ಪುರ: ಮುಂಬರುವ ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿಯಾಗಿ ಸ್ಫರ್ಧಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂಡಿಯಾ ಬಣ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದ್ದಾರೆ.
.ವಾಜಪೇಯಿ ಭಾರತ ರಾಜಕಾರಣದ ‘ಎರಡನೇ ನೆಹರೂ’: ಶಿವಸೇನೆ ನಾಯಕ ಸಂಜಯ್ ರಾವುತ್ .
‘ಮೈತ್ರಿ ಮಾಡಿಕೊಂಡರೆ, ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಇದರಿಂದ ಪಕ್ಷದ ಬೆಳಗವಣಿಗೆಗೆ ತೊಡಕುಂಟಾಗಲಿದೆ. ನಾವು ಮುಂಬೈ, ಠಾಣೆ, ನಾಗ್ಪುರ ಸೇರಿ ಇತರ ಮುನ್ಸಿಪಲ್ ಕಾರ್ಪೊರೇಷನ್ಗಳು, ಜಿಲ್ಲಾ ಪಂಚಾಯತ್ ಹಾಗೂ ಇತರ ಪಂಚಾಯತ್ಗಳಲ್ಲಿ ನಮ್ಮ ಬಲದಿಂದಲೇ ಸ್ಪರ್ಧೆ ಮಾಡುತ್ತೇವೆ’ ಎಂದು ರಾವುತ್ ಹೇಳಿದ್ದಾರೆ.

ಏಕಾಂಗಿಯಾಗಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
.EVM ಅಕ್ರಮ ಆರೋಪ: ಮತಪತ್ರಗಳ ಮೂಲಕ ಮರುಚುನಾವಣೆಗೆ ಸಂಜಯ್ ರಾವುತ್ ಆಗ್ರಹ.
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೇ ಸೋಲಿಗೆ ಕಾರಣ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರಿಗೆ ತಿರುಗೇಟು ನೀಡಿದ ರಾವುತ್, ಒಮ್ಮತ ಮತ್ತು ಹೊಂದಾಣಿಕೆಯಲ್ಲಿ ನಂಬಿಕೆ ಇಲ್ಲದವರಿಗೆ ಮೈತ್ರಿ ಮಾಡಿಕೊಳ್ಳುವ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಇಂಡಿಯಾ ಮೈತ್ರಿಕೂಟ ಒಂದೇ ಒಂದು ಸಭೆಯನ್ನೂ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.

‘ನಮಗೆ ಇಂಡಿಯಾ ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಿಸಲು ಸಾಧ್ಯವಾಗಲಿಲ್ಲ. ಅದು ಒಳ್ಳೆಯದಲ್ಲ. ಮೈತ್ರಿಕೂಟದ ದೊಡ್ಡ ಪಕ್ಷವಾಗಿ, ಸಭೆಯನ್ನು ಕರೆಯುವುದು ಕಾಂಗ್ರೆಸ್ನ ಜವಾಬ್ದಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.
.ಮಹಾರಾಷ್ಟ್ರ ಫಲಿತಾಂಶದ ಬಗ್ಗೆ ಕೊಂಕು ಮಾತು: BJPಯಿಂದ ಸಂಜಯ್ ರಾವುತ್ ತರಾಟೆಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.