ಜೈಪುರ: ರಾಜಸ್ಥಾನದ ದೌಸಾ ಜಲ್ಲೆಯ ಮದುವೆ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ ಮದುವೆ ಮುಗಿಸಿ ಮನೆಗೆ ತೆರಳಿದಾಗ ಬಾಲಕಿಯ ಬಟ್ಟೆ ಮೇಲೆ ರಕ್ತದ ಕಲೆಗಳಿದ್ದದ್ದನ್ನು ಗಮನಿಸಿ ವಿಚಾರಿಸದಾಗ ವಿಷಯ ತಿಳಿದಿದೆ. ನಂತರ ಬಾಲಕಿಯ ಪೋಷಕರು, ಪೊಲೀಸರಿಗೆ ದೂರು ನೀಡಿದ್ದಾರೆ.

ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ ದೌಸಾದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತ ಬಾಲಕಿಯನ್ನು ದೌಸಾದ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಸೇರಿಸಲಾಗಿದೆ. ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ದೌಸಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.