ಗುಂಟೂರು (ಆಂಧ್ರ ಪ್ರದೇಶ): ವೈಎಸ್ಆರ್ಸಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಪತ್ನಿ ವೈ.ಎಸ್. ಭಾರತಿ ರೆಡ್ಡಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಟಿಡಿಪಿ ಕಾರ್ಯಕರ್ತನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಸಿ.ಕಿರಣ್ ಕುಮಾರ್ ಎಂಬಾತನನ್ನು ವಿಜಯವಾಡ ಸಮೀಪದ ಇಬ್ರಾಹಿಂ ಪಟ್ಟಣದಲ್ಲಿ ಬಂಧಿಸಲಾಗಿದೆ ಎಂದು ಗುಂಟೂರು ಎಸ್ಪಿ ಎಸ್. ಸತೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ಆರೋಪಿ ಕುಮಾರ್ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪತ್ನಿ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿದ್ದಾನೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡದಂತೆ ಈ ಹಿಂದೆ ಟಿಡಿಪಿ ಕಾರ್ಯಕರ್ತರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಎಚ್ಚರಿಕೆ ನೀಡಿದ್ದರು.
.26/11 ಮುಂಬೈ ದಾಳಿಯ ಆರೋಪಿ ರಾಣಾ 18 ದಿನ ಎನ್ಐಎ ಕಸ್ಟಡಿಗೆ.ಸ್ಮಾರ್ಟ್ ಮೀಟರ್ಗೆ ಸಹಾಯಧನ ಖೋತಾ: ಕೇಂದ್ರದ ಒಪ್ಪಿಗೆ ಪಡೆಯದೆ RDSS ಯೋಜನೆ ಜಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.