ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ನುಸುಳುಕೋರರು ರಾಜ್ಯದಲ್ಲಿಯೇ ನೆಲಸಲು ಅವರಿಗೆ ನೆರವು ನೀಡುತ್ತಿದೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಮಂಗಳವಾರ ಆರೋಪಿಸಿದರು.

2011ರಲ್ಲಿ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಆದಾಗಿನಿಂದ ರಾಜ್ಯದಲ್ಲಿ ಮಹಿಳೆಯರ ಮೇಲಿನ ದಾಳಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ದೂರಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರವು 11 ವರ್ಷ ಪೂರ್ಣಗೊಳಿಸಿರುವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲು ರಾಜ್ಯ ಸರ್ಕಾರವು ಸಹಕಾರ ನೀಡುತ್ತಿಲ್ಲ. ನುಸುಳುಕೋರರು ಇಲ್ಲೇ ನೆಲಸಲು ಟಿಎಂಸಿ ಅವರಿಗೆ ನೆರವು ನೀಡುತ್ತಿದೆ. ಸರ್ಕಾರದ ಓಲೈಕೆ ನೀತಿಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.