ಸಮಾಧಿ: ಪ್ರತ್ಯೇಕ ಸ್ಥಳಕ್ಕೆ ಮನವಿ
ಮನಮೋಹನ ಸಿಂಗ್ ಅವರ ಸಮಾಧಿಗೆ ಯಮುನಾ ನದಿ ದಂಡೆಯ ರಾಜ್‌ಘಾಟ್‌ನಲ್ಲಿ ಪ್ರತ್ಯೇಕ ಸ್ಥಳ ನೀಡಬೇಕು ಎಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ರಾಜ್‌ಘಾಟ್‌ನಲ್ಲಿ ಹಲವು ಮಾಜಿ ಪ್ರಧಾನಿಗಳ ಸ್ಮಾರಕಗಳು ಇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಳಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಗಾಂಧಿ ಕುಟುಂಬದ ಹೊರಗಿನ ನಾಯಕರನ್ನು ನಿರ್ಲಕ್ಷಿಸುತ್ತದೆ ಎಂಬ ಆರೋಪವನ್ನು ಎದುರಿಸುತ್ತಿರುವ ಸಮಯದಲ್ಲೇ ಈ ಬೇಡಿಕೆ ಬಂದಿದೆ.