ನವದೆಹಲಿ: ಸನಾತನ ಧರ್ಮ ಕುರಿತು ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪಕ್ಷದ ನಾಯಕ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ಅನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿರುವ ಬೆನ್ನಲ್ಲೇ, ಡಿಎಂಕೆ ನಾಯಕನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ ಬುಧವಾರ ಆಗ್ರಹಿಸಿದೆ.

ಇಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ,‘ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದೂ ಒತ್ತಾಯಿಸಿದರು.

‘ಮದ್ರಾಸ್ ಹೈಕೋರ್ಟ್ನ ಮದುರೈ ಪೀಠವು ಛೀಮಾರಿ ಹಾಕಿದ ಬಳಿಕ, ಅಧಿಕಾರದಲ್ಲಿ ಮುಂದುವರಿಯಲು ಉದಯನಿಧಿ ಸ್ಟಾಲಿನ್ ನೈತಿಕತೆ ಹೊಂದಿಲ್ಲ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.