ಬೆಂಗಳೂರು: ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಜನ ಮೃತಪಟ್ಟಿರುವ ಘಟನೆ ದುರಾದೃಷ್ಟಕರವಾದದ್ದು ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಟೆಲಿಕಾನ್ಫರೆನ್ಸ್ ಮೂಲಕ ಅವಘಡದ ಮಾಹಿತಿ ಪಡೆದಿರುವ ಮುಖ್ಯಮಂತ್ರಿಯವರು, ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅವರೇ ಎಲ್ಲ ಮಾಹಿತಿ ನೀಡಲಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಇಂದು ಸಂಜೆಯ ವೇಳೆಗೆ ಪೊಲೀಸರ ಸಂಪೂರ್ಣ ತನಿಖಾ ವರದಿ ಟಿಟಿಡಿ ಮುಂದೆ ಇರಲಿದೆ. ಅದನ್ನು ನೋಡಿಕೊಂಡು ಏನು ಮಾಡಬೇಕು ಎಂಬುದರ ಬಗ್ಗೆ ಸಿಎಂ ಸಮ್ಮುಖದಲ್ಲಿ ತೀರ್ಮಾನಿಸುತ್ತೇವೆ ಎಂದಿದ್ದಾರೆ.

ಮೃತರಲ್ಲಿ ಕೆಲವರು ತಮಿಳುನಾಡು ಮತ್ತು ಕೆಲವರು ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ನಾಯ್ಡು ಹೇಳಿದರು.

ಮೃತರಲ್ಲಿ ಒಬ್ಬರ ಗುರುತು ಪತ್ತೆಯಾಗಿದ್ದು, ಇನ್ನೂ ಐವರ ಗುರುತು ಪತ್ತೆಯಾಗಬೇಕಿದೆ ಎಂದು ವಿವರಿಸಿದ್ದಾರೆ.

ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.

ಈ ಕಾಲ್ತುಳಿತ ಪ್ರಕರಣವು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿತು ಎಂದು ಹಲವು ಭಕ್ತಾದಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
.ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಭಕ್ತರು ಸಾವು.ತಿರುಪತಿಯಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ ಹೇರಿದ ಟಿಟಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.