ಆಗ್ರಾ: ರಾಜ್ಯದ ಅಭಿವೃದ್ಧಿಯಲ್ಲಿ ವಿರೋಧ ಪಕ್ಷಗಳು ತಡೆಗೋಡೆಗಳಾಗಿ ವರ್ತಿಸುತ್ತಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘2017ರ ಮೊದಲು ಉತ್ತರ ಪ್ರದೇಶದ ಸಾರ್ವಜನಿಕ ಆಡಳಿತವನ್ನು ಗೂಂಡಾಗಿರಿ ಮತ್ತು ಮಾಫಿಯಾ ಆಳುತ್ತಿತ್ತು ಎಂಬುದನ್ನು 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ನೆನಪಿಸಿಕೊಳ್ಳುತ್ತಾರೆ. ಈ ಅವಧಿಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡರು. ಬಡವರು ಹಸಿವಿನಿಂದ ಸತ್ತರು. ರಾಜ್ಯದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿರಲಿಲ್ಲ’ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ರಾಜ್ಯದ ಅಭಿವೃದ್ಧಿಯನ್ನು ವಿರೋಧಿಸುತ್ತಿವೆ ಎಂದು ಆದಿತ್ಯನಾಥ್ ಟೀಕಿಸಿದ್ದಾರೆ.

‘ಕಾಂಗ್ರೆಸ್, ಸಮಾಜವಾದಿ ಪಕ್ಷಗಳು ಅವಕಾಶ ಸಿಕ್ಕಾಗ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಈಗ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವಾಗ, ಅಭಿವೃದ್ಧಿಯ ಹಾದಿಯಲ್ಲಿ ತಡೆಗೋಡೆಯಾಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯನ್ನು ಅವರು ಸಹಿಸಿಕೊಳ್ಳಲಿಲ್ಲ. ಮಹಾ ಕುಂಭಮೇಳದ ಬಗ್ಗೆ ಸುಳ್ಳು ಪ್ರಚಾರ ಮಾಡಿದ್ದಾರೆ’ ಎಂದು ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.