ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಜೂಜಾಟ ನಡೆದ ಸ್ಥಳ ಪರಿಶೀಲನೆಗೆ ಬಂದ ಪೊಲೀಸರ ಮೇಲೆ ಸ್ಥಳೀಯ ನಿವಾಸಿಗಳು ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದು, ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಠಾಣೆಗಳಿಂದ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಮಾರ್ಚ್ 27ರಂದು ರಾತ್ರಿ 10.30ರ ಸುಮಾರಿಗೆ ಸಬ್ ಇನ್ಸ್ಪೆಕ್ಟರ್ ಸಂದೀಪ್ ಸಿಂಗ್ ಮತ್ತು ಮೂವರು ಕಾನ್ಸ್ಟೆಬಲ್ಗಳು, ಕೆಲವು ದಿನಗಳ ಹಿಂದೆ ವ್ಯಕ್ತಿಗಳು ಜೂಜಾಟದಲ್ಲಿ ಸಿಕ್ಕಿಬಿದ್ದಿದ್ದ ಕೋಸಿ ಕಲಾನ್ನ ನಿಕಾಸಾ ಪ್ರದೇಶದ ಸ್ಥಳ ಪರಿಶೀಲನೆಗೆ ತೆರಳಿದ್ದರು. ಅವರು ತನಿಖೆ ನಡೆಸುತ್ತಿರುವ ವೇಳೆ, ಜನರ ಗುಂಪೊಂದು ಜಮಾಯಿಸಿದ್ದು ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಕಾನ್ಸ್ಟೆಬಲ್ಗಳಾದ ನಿಕ್ಲೇಶ್ ಮತ್ತು ಅಂಕಿತ್ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತ್ರಿಗುಣ್ ಬಿಸೆನ್ ತಿಳಿಸಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳು ಆಗಮಿಸಿದ್ದು, ದಾಳಿಕೋರರು ಪರಾರಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶಾಂತಿ ಕಾಪಾಡಲು ಪ್ರದೇಶದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.