ಲಖನೌ: ವಕ್ಫ್ ಹೆಸರಲ್ಲಿ ವಶಪಡಿಸಿಕೊಂಡಿರುವ ಪ್ರತಿ ಇಂಚು ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ.

‘ಅದು ವಕ್ಫ್ ಮಂಡಳಿಯೋ ಅಥವಾ ಭೂ ಮಾಫಿಯಾದ ಮಂಡಳಿಯೋ ಎಂದು ಹೇಳುವುದು ಕಠಿಣವಾಗಿದೆ. ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಆಕ್ರಮಿತ ಭೂಮಿಯ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಆ ಎಲ್ಲ ಆಸ್ತಿಗಳನ್ನು ವಶಪಡಿಸಿಕೊಂಡು ಅದನ್ನು ಬಡವರಿಗೆ ವಸತಿ ಕಲ್ಪಿಸಲು, ಶಿಕ್ಷಣ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ನಿರ್ಮಿಸಲು ಬಳಸಿಕೊಳ್ಳಲಾಗುವುದು’ ಎಂದು ಆದಿತ್ಯನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಹಳೆಯ ವಿವಾದಗಳ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಆದಿತ್ಯನಾಥ್, ‘ಹಳೆಯ ಗಾಯಗಳಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.