ಲಖನೌ: ಉತ್ತರ ಪ್ರದೇಶದ ಜಲೌನ್ನಲ್ಲಿ ನರ್ಸ್ವೊಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದು, ಗುಪ್ತಾಂಗಕ್ಕೆ ಕೋಲು ಮತ್ತು ಮೆಣಸಿನ ಪುಡಿಯನ್ನು ಎರಚಿ ಕ್ರೌರ್ಯ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇತರ ನಾಲ್ವರು ನನ್ನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾಗಿಯೂ ಸಂತ್ರಸ್ತೆ ದೂರಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯ ಕುಟುಂಬಸ್ಥರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಆಕೆಯನ್ನು ಅಡ್ಡಗಟ್ಟಿ, ಪೊದೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ‘ಎನ್ಡಿಟಿವಿ’ ವರದಿ ಮಾಡಿದೆ.

ಸಂತ್ರಸ್ತ ಮಹಿಳೆಯು ಆದೇ ಗ್ರಾಮದ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ವಿವಾದದ ಸಂದರ್ಭದಲ್ಲಿ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಂತದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ವಿವರಿಸಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಲೌನ್ನ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಕುಮಾರ್ ವರ್ಮಾ ಹೇಳಿದ್ದಾರೆ.

ನವೆಂಬರ್ 22ರಂದು ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಚಲಿಸುವ ಆಂಬುಲೆನ್ಸ್ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿತ್ತು. ಘಟನೆ ಸಂಬಂಧ ಚಾಲಕ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
.ಚಲಿಸುತ್ತಿದ್ದ ‘108 ಆಂಬುಲೆನ್ಸ್’ನಲ್ಲಿ 16ರ ಬಾಲಕಿ ಮೇಲೆ ಅತ್ಯಾಚಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.