ನವದೆಹಲಿ: ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿ ಹಾಕಿದೆ.

ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ ಆರೋಪವು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಅದು ಹೇಳಿದೆ.

'ರಾಹುಲ್ ಆರೋಪವು ನಿರಾಧಾರವಾಗಿದ್ದು, ಅವರು ಅಂದುಕೊಂಡಂತೆ ಆನ್ಲೈನ್ನಲ್ಲಿ ಸಾರ್ವಜನಿಕರಿಗೆ ಯಾವುದೇ ಮತವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಮತದಾರರಿಗೆ ಮಾಹಿತಿ ನೀಡದೇ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ' ಎಂದು ಹೇಳಿದೆ.

'ಮತ ಕಳ್ಳತನ' ಆರೋಪ ಸಂಬಂಧ ಇಂದು (ಗುರುವಾರ) ಮತ್ತೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಚುನಾವಣಾ ಆಯೋಗವು ರಕ್ಷಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

'ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿ ಹಾಕಲಾಗುತ್ತಿದೆ. ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು' ಎಂದು ರಾಹುಲ್ ಆರೋಪಿಸಿದ್ದಾರೆ.
.ಆಳಂದದಲ್ಲಿ 6,018 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಯತ್ನ: ರಾಹುಲ್ .ಮತ ಕಳ್ಳತನ | ಹೈಡ್ರೋಜನ್ ಬಾಂಬ್ ಇನ್ನು ಬರಬೇಕಷ್ಟೇ: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.