ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಬಿಜೆಪಿ ತೊರೆದ ಸಂಸದ ಕುನಾರ್‌ ಹೆಮ್‌ಬ್ರಮ್‌

Published 9 ಮಾರ್ಚ್ 2024, 7:15 IST
Last Updated 9 ಮಾರ್ಚ್ 2024, 7:15 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಕ್ಷೇತ್ರದ ಬಿಜೆಪಿ ಸಂಸದ ಕುನಾರ್‌ ಹೆಮ್‌ಬ್ರಮ್‌ ಅವರು ಶನಿವಾರ ಲೋಕಸಭೆಯ ಸದಸ್ಯತ್ವ ಮತ್ತು ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಮೊದಲ ಬಾರಿಗೆ ಸಂಸದರಾಗಿದ್ದ ಹೆಮ್‌ಬ್ರಮ್‌, ‘ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ರಾಜಕಾರಣದಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ. ಯಾವುದೇ ಪಕ್ಷವನ್ನು ಸೇರುತ್ತಿಲ್ಲ. ಪುಸ್ತಕ ಬರವಣಿಗೆ ಮತ್ತು ಸಮಾಜ ಸೇವೆಯಲ್ಲಿ ನನ್ನ ಸಮಯ ಕಳೆಯಲಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೆಮ್‌ಬ್ರಮ್‌ ಕೆಲವು ದಿನಗಳ ಹಿಂದೆಯೇ ತಮ್ಮ ನಿರ್ಧಾರದ ಬಗ್ಗೆ ಪಕ್ಷದ ನಾಯಕರಿಗೆ ತಿಳಿಸಿದ್ದರು ಎಂದು ಬಿಜೆಪಿ ರಾಜ್ಯ ವಕ್ತಾರ ಸಮಿಕ್‌ ಭಟ್ಟಾಚಾರ್ಯ ಹೇಳಿದ್ದಾರೆ.

ಜಂಗಲ್‌ ಮಹಲ್‌ ಪ್ರದೇಶದ ಝಾರ್‌ಗ್ರಾಮ್‌ ಲೋಕಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಗೆಲುವು ಕಂಡಿರುವ ಬಿಜೆಪಿ ಈವರೆಗೆ ಈ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. 

 ‘ಬಿಜೆಪಿಯು ಈ ಕ್ಷೇತ್ರದಲ್ಲಿ ಸೋಲು ಕಾಣಲಿದೆ ಎನ್ನುವುದು ಹೆಮ್‌ಬ್ರಮ್‌ ಅವರಿಗೆ ಗೊತ್ತಿದೆ. ಹಾಗಾಗಿಯೇ ಅವರು ಪಕ್ಷ ತೊರೆದಿದ್ದಾರೆ’ ಎಂದು ಟಿಎಂಸಿ ಸಂಸದ ಶಂತನು ಸೆನ್‌ ಪ್ರತಿಕ್ರಿಯಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT