ಕೋಲ್ಕತ್ತ: ಪಶ್ಚಿಮ ಬರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಶಂಕಿತ ಆರೋಪಿಯನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿವರವನ್ನು ಪೊಲೀಸರು ಬಹಿರಂಗಪಡಿಸಿಲ್ಲ.

‘ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಬಂಧಿತರ ವಿಚಾರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಂತರ ನೀಡಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ದುರ್ಗಾಪುರದಲ್ಲಿರುವ ವೈದ್ಯಕೀಯ ಕಾಲೇಜಿನ ಕ್ಯಾಂಪಸ್ ಹೊರಗೆ, ಶುಕ್ರವಾರ ರಾತ್ರಿ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಊಟ ಮಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ಸಂತ್ರಸ್ತೆ ಒಡಿಶಾದ ಜಲೇಶ್ವರ ಪ್ರದೇಶದವರು.

ಪ್ರಕರಣದಲ್ಲಿ ಸಂತ್ರಸ್ತೆಯ ಸ್ನೇಹಿತನ ಪಾತ್ರ ಮತ್ತು ಆತನಿಗೆ ಆರೋಪಿಗಳ ಪರಿಚಯ ಇತ್ತೇ ಎನ್ನುವುದರ ಕುರಿತೂ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸುರಕ್ಷಿತವಲ್ಲ: ‘ಪಶ್ಚಿಮ ಬಂಗಾಳವು ಅಪರಾಧಿಗಳ ಪಾಲಿಗೆ ಸುರಕ್ಷಿತ ಸ್ವರ್ಗವಾಗಿದೆಯೇ ಹೊರತು ಇಲ್ಲಿ ಮಹಿಳೆಯರಿಗೆ ಯಾವುದೇ ಭದ್ರತೆ ಇಲ್ಲ’ ಎಂದು ಸಿಪಿಎಂ ಆರೋಪಿಸಿದೆ.

‘ದುರ್ಗಾಪುರದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವು, ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತವಾಗಿಲ್ಲ ಎನ್ನುವುದನ್ನು ಸಾಬೀತುಪಡಿಸಿದೆ’ ಎಂದು ಸಿಪಿಎಂ ಕೇಂದ್ರ ಸಮಿತಿಯ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.

‘ವಸತಿ ನಿಲಯದಲ್ಲಿದ್ದುಕೊಂಡು ಅಧ್ಯಯನ ಮಾಡುವ ವಿದ್ಯಾರ್ಥಿಗಳು, ವಿಶೇಷವಾಗಿ ಹೊರ ರಾಜ್ಯದವರು ವಸತಿ ನಿಲಯದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಡರಾತ್ರಿ ಹೊರಗೆ ಹೋಗಬಾರದು’ ಎಂದು ಅವರು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ:

ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಶ್ಚಿಮ ಬಂಗಾಳದ ವಿವಿಧೆಡೆ ಭಾನುವಾರ ಪ್ರತಿಭಟನೆ ನಡೆಸಿದರು.

ಕೋಲ್ಕತ್ತದ ಅಸನ್ಸೋಲ್ ಪೊಲೀಸ್ ಠಾಣೆ ಎದುರು ಬಿಜೆಪಿ ಧರಣಿ ನಡೆಸಿತು. ಸಂತ್ರಸ್ತೆಯನ್ನು ದಾಖಲಿಸಿರುವ ಆಸ್ಪತ್ರೆಗೆ ಬಿಜೆಪಿಯ ಮಾಜಿ ಸಂಸದ ಲೊಕೆಟ್ ಚಟರ್ಜಿ ಭೇಟಿ ನೀಡಲು ಪ್ರಯತ್ನಿಸಿದರು. ಆದರೆ, ಪೊಲೀಸರು ಅವರಿಗೆ ಅವಕಾಶ ನಿರಾಕರಿಸಿದರು.

ಕಾಂಗ್ರೆಸ್ನ ಮಹಿಳಾ ಘಟಕದ ಪದಾಧಿಕಾರಿಗಳು ವೈದ್ಯಕೀಯ ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

2024ರಲ್ಲಿ ಕೋಲ್ಕತ್ತದ ಆರ್ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರದ ನಂತರ ರಚಿಸಲಾದ, ‘ಅಭಯ ಮಂಚ್’ನ ಸದಸ್ಯರು ಮತ್ತು ವೈದ್ಯರು ದುರ್ಗಾಪುರಕ್ಕೆ ಭೇಟಿ ನೀಡಿದರು.

ಯಾರನ್ನೂ ಬಿಡುವುದಿಲ್ಲ: ಮಮತಾ

‘ದುರ್ಗಾಪುರದ ಸಾಮೂಹಿಕ ಅತ್ಯಾಚಾರ ಪ್ರಕರಣದ ಯಾವೊಬ್ಬ ಆರೋಪಿಯನ್ನೂ ಸುಮ್ಮನೆ ಬಿಡುವುದಿಲ್ಲ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸರ್ಕಾರವು ಇಂತಹ ಅಪರಾಧ ಕೃತ್ಯಗಳಲ್ಲಿ ಆರೋಪಿಗಳ ಬಗ್ಗೆ ಶೂನ್ಯ ಸಹನೆ ನೀತಿ ಹೊಂದಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇನ್ನುಳಿದವರ ಬಂಧನಕ್ಕೆ ಶೋಧ ನಡೆಯುತ್ತಿದೆ. ಯಾರನ್ನೂ ಬಿಡುವುದಿಲ್ಲ’ ಎಂದರು. ‘ವಿದ್ಯಾರ್ಥಿನಿ ಅಧ್ಯಯನ ಮಾಡುತ್ತಿದ್ದ ವೈದ್ಯಕೀಯ ಕಾಲೇಜು ಸಹ ಈ ಘಟನೆಗೆ ಹೊಣೆಗಾರ. ಖಾಸಗಿ ಕಾಲೇಜುಗಳು ತಮ್ಮ ಕ್ಯಾಂಪಸ್ ಒಳಗೆ ಮತ್ತು ಕ್ಯಾಂಪಸ್ ಸುತ್ತಮುತ್ತ ವಿದ್ಯಾರ್ಥಿಗಳಿಗೆ ಒದಗಿಸಿರುವ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು. ‘ಎಲ್ಲ ಆರೋಪಿಗಳನ್ನು ಬಂಧಿಸಿ’ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒಡಿಶಾದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸೊವನಾ ಮೊಹಾಂತಿ ಆಗ್ರಹಿಸಿದ್ದಾರೆ. ‘ಕೃತ್ಯ ನಡೆದ 36 ಗಂಟೆಗಳ ಬಳಿಕ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದಾರೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
.ಪಶ್ಚಿಮ ಬಂಗಾಳ: ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.