ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲು ಮಸೂದೆ ಪೊಳ್ಳು ಭರವಸೆ: ಖರ್ಗೆ ಟೀಕೆ

Published 28 ಸೆಪ್ಟೆಂಬರ್ 2023, 12:56 IST
Last Updated 28 ಸೆಪ್ಟೆಂಬರ್ 2023, 12:56 IST
ಅಕ್ಷರ ಗಾತ್ರ

ರಾಯಪುರ : ‘ಮಹಿಳಾ ಮೀಸಲು ಮಸೂದೆಯು ಬಿಜೆಪಿಯ ಪೊಳ್ಳು ಭರವಸೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಛತ್ತೀಸಗಢದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಮಹಿಳಾ ಮೀಸಲು ಮಸೂದೆಯನ್ನು 2034ರವರೆಗೂ ಜಾರಿಗೊಳಿಸಲು ಆಗುವುದಿಲ್ಲ. ಈ ಮಸೂದೆ ಆಧರಿಸಿ ಜನರು ಮತ ಹಾಕುತ್ತಾರೆ ಮತ್ತು ಕೆಲ ಸಮಯದಲ್ಲಿ ಪಕ್ಷ ನೀಡಿದ ಭರವಸೆಗಳನ್ನು ಮರೆತುಬಿಡುತ್ತಾರೆ ಎಂದು ಬಿಜೆಪಿ ಯೋಚಿಸಿದೆ’ ಎಂದರು.

’ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕಾರಗೊಂಡಿರುವ ಮಹಿಳಾ ಮೀಸಲಾತಿ ಮಸೂದೆಯು ಹೊಸತಲ್ಲ. ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪಂಚಾಯತ್‌ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಖಚಿತಪಡಿಸಲು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿಗಳನ್ನು ತಂದಿದ್ದರು‘ ಎಂದು ಅವರು ಸ್ಮರಿಸಿದರು.  

‘ಇತರ ಹಿಂದುಳಿದ ವರ್ಗಗಳ ಗಣತಿ ಕಾರ್ಯ ಆಗಬೇಕು ಹಾಗೂ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೂ (ಒಬಿಸಿ) ಕೋಟಾ ದೊರೆಯುವಂತಾಗಬೇಕು’ ಎಂದು ಅವರು ಆಗ್ರಹಿಸಿದರು.

’ಛತ್ತೀಸಗಢದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವು ಐದು ವರ್ಷಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಇಷ್ಟು ಕೆಲಸ ಮಾಡಲು ಬಿಜೆಪಿಗೆ 15 ವರ್ಷಗಳೇ ಬೇಕಾಗುತ್ತವೆ. ರಾಜ್ಯದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಮಕ್ಕಳಿಗೆ ಕಾಂಗ್ರೆಸ್‌ ಸರ್ಕಾರ ಸಾಕಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT