ಬೆಂಗಳೂರು: ‘ನಟಿ ರನ್ಯಾ ರಾವ್ ಹಾಗೂ ಸಹಚರರು ಒಂದು ವರ್ಷದಲ್ಲಿ ₹102.55 ಕೋಟಿ ಮೌಲ್ಯದ 127 ಕೆ.ಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ’ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಹೇಳಿದೆ.

ವಿಶೇಷ ನ್ಯಾಯಾಲಯಕ್ಕೆ ಇ.ಡಿ ಬುಧವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದಡಿ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2025ರ ಮಾರ್ಚ್ 4ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿ ಅಪಾರ ಪ್ರಮಾಣದ ನಗದು ಹಾಗೂ ಚಿನ್ನದ ಬಿಸ್ಕತ್ಗಳನ್ನು ಜಪ್ತಿ ಮಾಡಿದ್ದರು.

ಅದಾದ ಮೇಲೆ ನಗರದ ಲ್ಯಾವೆಲ್ಲೆ ರಸ್ತೆಯ ನಂದವಾಣಿ ಮ್ಯಾನ್ಶನ್ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ದರು ನಗದು ಜಪ್ತಿ ಮಾಡಿದ್ದರು. ರನ್ಯಾ ರಾವ್, ತರುಣ್ ಕೊಂಡೂರು ರಾಜು, ಸಾಹಿಲ್ ಸರ್ಕಾರಿಯಾ ಅವರ ಹೆಸರನ್ನು ದೋಷಾರೋಪ ಪಟ್ಟಿಯಲ್ಲಿ ಇ.ಡಿ ಉಲ್ಲೇಖಿಸಿದೆ.

ರನ್ಯಾ ಅವರು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಣೆ ಮಾಡಿಕೊಂಡು ಬಂದು ಅದರ ವಿಲೇವಾರಿಗೆ ಸಹಚರರನ್ನು ಬಳಸಿಕೊಂಡಿದ್ದರು. ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ (ತಡೆ) ಕಾಯ್ದೆ (ಪಿಎಂಎಲ್ಎ) ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು ಎಂದು ಇ.ಡಿ ಹೇಳಿದೆ.

‘ಕಳ್ಳ ಸಾಗಣೆ ಮಾಡಿಕೊಂಡು ಬಂದ ಚಿನ್ನವನ್ನು ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡಲಾಗಿತ್ತು. ಹವಾಲದ ಮೂಲಕ ಹಣ ಪಡೆದುಕೊಳ್ಳಲಾಗಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಉಲ್ಲೇಖಿಸಲಾಗಿದೆ.

ಕಳೆದ ವರ್ಷದ ಮೇ 21, 22ರಂದು ರಾಜ್ಯದ 16 ಸ್ಥಳಗಳ ಮೇಲೆ ದಾಳಿ ನಡೆಸಿ ದಾಖಲೆಗಳು, ಡಿಜಿಟಲ್ ಸಾಕ್ಷ್ಯ ಹಾಗೂ ದೇಶ– ವಿದೇಶಗಳ ಕರೆನ್ಸಿ ಜಪ್ತಿ ಮಾಡಲಾಗಿತ್ತು ಎಂದು ಉಲ್ಲೇಖಿಸಲಾಗಿದೆ.

ರನ್ಯಾ ಹಾಗೂ ತರುಣ್ ಕೊಂಡೂರು ರಾಜ್ ಅವರಿಗೆ ಕೆಲವು ತಿಂಗಳ ಹಿಂದೆ ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ರನ್ಯಾ ಅವರ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯ (ಕಾಫಿಫೋಸಾ) 3(1) ಸೆಕ್ಷನ್ ಅಡಿಯಲ್ಲಿ ಬಂಧನದ ಆದೇಶ ಹೊರಡಿಸಿತ್ತು. ಕಾಫಿಪೋಸಾ ಪ್ರಕರಣದಲ್ಲಿ ಬಂಧನವಾದರೆ ಜಾಮೀನಿನ ಮೇಲೆ ಬಿಡುಗಡೆ ಸಾಧ್ಯವಿಲ್ಲ. ಹೀಗಾಗಿ, ಜಾಮೀನು ಸಿಕ್ಕರೂ ರನ್ಯಾ ಅವರಿಗೆ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.