ಬೆಂಗಳೂರು: ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣೀಕರ್ತರು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇರುವ ಕುರಿತು ಮಾಹಿತಿ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ’ ಎಂದರು.

ಬೆಂಗಳೂರಿನಲ್ಲಿ ಹಾಡುಹಗಲೇ ಇಂತಹ ಘಟನೆ ನಡೆದಿಲ್ಲ. ₹7 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹಣ ದರೋಡೆ ಮಾಡಲಾಗಿದೆ. ವಾಹನಗಳ ನಂಬರ್ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದಲ್ಲಿಯವರಾ ತನಿಖೆ ನಡೆಯುತ್ತಿದೆ. ತನಿಖೆಯ ದೃಷ್ಟಿಯಿಂದ ಎಲ್ಲ ಮಾಹಿತಿ ಹಂಚಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
.ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.