ಬೆಂಗಳೂರು: ‘ಬಳ್ಳಾರಿ ಘರ್ಷಣೆಯ ವೇಳೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ನಡೆಸಿಲ್ಲವೆಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

‘ರಾಜಶೇಖರ್ ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ನಡೆಸಲಾಗಿದೆ’ ಎಂಬ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ’ ಎಂದರು.

‘ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ನಾಯಕರು, ಅದನ್ನು ನೋಡಿದ್ದಾರೆಯೇ? ಎರಡು ಬಾರಿ ನಡೆಸಿಲ್ಲವೆಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಹೇಳಿಕೆ ನೀಡಿದ್ದಾರೆ. ಇನ್ನು ಯಾರ ಮಾತನ್ನು ನಂಬಬೇಕು. ವೈದ್ಯರ ಮಾತನ್ನು ನಾನು ಕೂಡ ಒಪ್ಪುತ್ತೇನೆ’ ಎಂದರು.

‘38 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದೇನೆ. ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಮೂರನೇ ಬಾರಿಗೆ ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ರಾಜ್ಯದ ಕಾನೂನು ವ್ಯವಸ್ಥೆಯ ದೃಷ್ಟಿಯಿಂದ, ಯಾವ ಸಂದರ್ಭದಲ್ಲಿ ಏನು ತೀರ್ಮಾನ ತೆಗೆದುಕೊಳ್ಳಬೇಕು, ಕಠಿಣವಾದ ನಿರ್ಧಾರ ಯಾವಾಗ ತೆಗೆದುಕೊಳ್ಳಬೇಕೆಂಬ ಎಂಬ ಅರಿವು ನನಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.