ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂಪಾಠಕ್ ಖಚಿತಪಡಿಸಿದ್ದಾರೆ.
.‘ಮಧು ಬಲೆ’ ಚೀಟಿ ಬಹಿರಂಗಪಡಿಸಿದರೆ ಕ್ರಾಂತಿ: ಯತ್ನಾಳ .
ವಿಜಯಪುರ ಕ್ಷೇತ್ರದ ಶಾಸಕರಾಗಿರುವ ಯತ್ನಾಳ ಶಿಸ್ತು ಉಲ್ಲಂಘಿಸುತ್ತಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಸಂಬಂಧ ಅವರಿಗೆ ಫೆಬ್ರುವರಿ 10ರಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು.

ಉಚ್ಚಾಟನೆ ಆದೇಶ ಪ್ರತಿಯಲ್ಲಿ ಏನಿದೆ?

‘ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರುವರಿ 10 ರಂದು ನೀಡಲಾದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದ್ದೇವೆ. ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಉತ್ತರಿಸುವಾಗ ಉತ್ತಮ ನಡವಳಿಕೆಯ ಭರವಸೆ ನೀಡಿದ್ದರೂ ಕೂಡ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
.Gold smuggling case | ರನ್ಯಾ ನಿಂದನೆ: ಯತ್ನಾಳ ವಿರುದ್ಧ ಎಫ್ಐಆರ್.
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣ ಜಾರಿಗೆ ಬರುವಂತೆ ನಿಮ್ಮನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಯಾವುದೇ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ’.
.ಬಿಜೆಪಿಯನ್ನೇ ರಿಪೇರಿ ಮಾಡುತ್ತೇನೆ, ಹೊಸ ಪಕ್ಷ ಕಟ್ಟಲ್ಲ: ಬಸನಗೌಡ ಪಾಟೀಲ ಯತ್ನಾಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.