ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಬಂದ್: ಸಾಮಾಜಿಕ ಜಾಲತಾಣಗಳಲ್ಲಿ #ಕಾವೇರಿನಮ್ಮದು ಟ್ರೆಂಡಿಂಗ್

Published 25 ಸೆಪ್ಟೆಂಬರ್ 2023, 9:52 IST
Last Updated 25 ಸೆಪ್ಟೆಂಬರ್ 2023, 9:52 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‘ಕಾವೇರಿ ನಮ್ಮದು‘ ಎಂಬ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈಗಾಗಲೇ #ಕಾವೇರಿನಮ್ಮದು ಎಂಬ ಹ್ಯಾಶ್‌ ಟ್ಯಾಗ್ ಭಾರಿ ಟ್ರೆಂಡ್‌ ಆಗುತ್ತಿದೆ.

ಕಾವೇರಿ ನಮ್ಮದು ಎಂಬ ಅಭಿಯಾನಕ್ಕೆ ವಿವಿಧ ಸಂಘಟನೆಗಳ ನಾಯಕರು ಸೇರಿದಂತೆ ಸ್ವಯಂ ಪ್ರೇರಿತರಾಗಿ ಅನೇಕರು ಪೋಸ್ಟ್‌ಗಳನ್ನು ಹಂಚಿಕೊಂಡು ಜನರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ನಾಯಕರು ಕಾವೇರಿ ನಮ್ಮದು ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದೆಂದು ವಿವಿಧ ಸಂಘಟನೆಗಳು ಪ್ರತಿಭಟನೆಗಳು ನಡೆಸುತ್ತಿವೆ. ಇದರ ಮುಂದುವರೆದ ಭಾಗವಾಗಿ ನಾಳೆ ( ಸೆಪ್ಟೆಂಬರ್‌ 26ರಂದು ) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, 90ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಘೋಷಿಸಿವೆ. ಅಂದೇ ರಾಮನಗರ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ ತಾಲ್ಲೂಕಿನಲ್ಲೂ ಬಂದ್‌ ನಡೆಸಲು ಸ್ಥಳೀಯ ಸಂಘಟನೆಗಳು ನಿರ್ಧರಿಸಿವೆ.

ಬಿಎಂಟಿಸಿ ಬಸ್‌ಗಳನ್ನು ರಸ್ತೆಗಿಳಿಸದಂತೆ ಕೆಎಸ್‌ಆರ್‌ಟಿಸಿ ಸ್ಟಾಫ್‌ ಅಂಡ್‌ ವರ್ಕರ್ಸ್‌ ಫೆಡರೇಷನ್‌ ಕರೆ ನೀಡಿದ್ದು ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಆಟೊ, ಕ್ಯಾಬ್‌ ಸಂಚಾರ ಇರುವುದಿಲ್ಲ. ಕರ್ನಾಟಕ ಟೆಲಿವಿಷನ್ ಕಲಾವಿದರ ಸಂಘ ಚಿತ್ರೀಕರಣ ಬಂದ್ ಮಾಡಲು ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT