ಬೆಂಗಳೂರು: ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ, ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗಲಿದೆ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದರು.

ಬೆಂಗಳೂರಿನ ಮೆಟ್ರೊಗೆ ಶೇ 87ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ 87ರಷ್ಟು ಹಣದಲ್ಲಿ ಮೆಟ್ರೊ ಆಗಿದೆ. ಆದರೆ ಬಿಜೆಪಿಯವರು ಮೆಟ್ರೊ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ ಎಂದರು.

ಜಿಎಸ್ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ ‘ದೀಪಾವಳಿ ಗಿಫ್ಟ್’ ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ತೀರಿ ಎಂದು ಸಾರ್ವಜನಿಕರಿಗೆ ಪ್ರಶ್ನಿಸಿದರು.

‘ದೀಪಾವಳಿ ಗಿಫ್ಟ್’ ಎಂದು ಜಾಹೀರಾತು ನೀಡಿರುವ ಮೋದಿ ಸರ್ಕಾರವು ಜಿಎಸ್ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ ₹15 ಸಾವಿರ ಕೋಟಿ ನಷ್ಟವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದರು.

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು.
.ಬೆಂಗಳೂರು ಅಭಿವೃದ್ಧಿಗೆ ಮೋದಿ ಒಂದು ಪೈಸೆಯೂ ಕೊಟ್ಟಿಲ್ಲ: ಡಿ.ಕೆ.ಶಿವಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.