ಬೆಂಗಳೂರು: ‘ಭೂ ಒಡೆತನ ಯೋಜನೆ ಅಡಿಯಲ್ಲಿ ಆಯ್ಕೆಯಾಗುವ ಫಲಾನುಭವಿಗಳಿಂದ ಶೇಕಡ 60ರಷ್ಟು ಲಂಚ ನೀಡುವಂತೆ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರು ಬೇಡಿಕೆ ಇಡುತ್ತಿದ್ದಾರೆ’ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರವಿಕುಮಾರ್ ಅವರು ಭೋವಿ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಸಮುದಾಯದ ಜನರ ಅಭಿವೃದ್ಧಿಗೆ ಇರುವ ಯೋಜನೆಗಳನ್ನು ಹಂಚಿಕೆ ಮಾಡಲು ಲಂಚದ ಬೇಡಿಕೆ ಇಡುತ್ತಿದ್ದಾರೆ. ಜವಾಬ್ದಾರಿಯುತ ಹುದ್ದೆಯಲ್ಲಿರುವ ಇವರು ಫಲಾನುಭವಿಗಳಿಂದ ಲಂಚ ಪಡೆದುಕೊಳ್ಳುತ್ತಿರುವುದು ಖಂಡನೀಯ’ ಎಂದು ಹೇಳಿದರು.

‘ರವಿಕುಮಾರ್ ಅವರು ನಿಗಮದಲ್ಲಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವುದನ್ನು ಬಿಟ್ಟು, ಮಧ್ಯವರ್ತಿಗಳ ಮೂಲಕ ಹಣ ನೀಡುವಂತೆ ಫಲಾನುಭವಿಗಳಿಗೆ ಪೀಡಿಸುತ್ತಿದ್ದಾರೆ. ಈ ಬಗ್ಗೆ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊಗಳು ನನ್ನ ಬಳಿ ಇವೆ. ಕೂಡಲೇ ರವಿಕುಮಾರ್ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು. ಅವರ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ನಾಚಿಕೆಗೇಡಿನ ಪರಮಾವಧಿ’

ಬೆಂಗಳೂರು: ‘ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂಒಡೆತನ ಯೋಜನೆಯಡಿ ಲಂಚ ಕೇಳಿ ಸಿಕ್ಕಿಬಿದ್ದಿರುವ ಪ್ರಕರಣ ಅತ್ಯಂತ ನಾಚಿಕೆಗೇಡಿತನದ ಪರಮಾವಧಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ‘ಎಕ್ಸ್’ ಮಾಡಿರುವ ಅವರು, ‘ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಈ ಮೊದಲು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿತ್ತು. ನಂತರ ಪರಿಶಿಷ್ಟರು, ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಮೀಸಲಿಟ್ಟಿರುವ ಹಣವನ್ನೂ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿತ್ತು. ಇದೀಗ ಭೋವಿ ಸಮುದಾಯದ ಅಭಿವೃದ್ಧಿ ನಿಗಮದ ಫಲಾನುಭವಿಗಳಿಂದ ವಸೂಲಿಗೆ ಇಳಿದಿರುವುದು ನಿಜಕ್ಕೂ ನಾಡಿನ ದೌರ್ಭಾಗ್ಯ’ ಎಂದು ಟೀಕಿಸಿದ್ದಾರೆ.

‘ಭೋವಿ ಸಮುದಾಯದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಬೇಕಿದ್ದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧ್ಯಕ್ಷರೇ ವಸೂಲಿಗಿಳಿದಿರುವುದು ಸರಿಯಲ್ಲ. ಈ ಸಂಬಂಧ ಲೋಕಾಯುಕ್ತರು ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.