ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cauvery Water Dispute: ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸಚಿವರ ಸಭೆ ಆರಂಭ

Published 20 ಸೆಪ್ಟೆಂಬರ್ 2023, 4:29 IST
Last Updated 20 ಸೆಪ್ಟೆಂಬರ್ 2023, 4:29 IST
ಅಕ್ಷರ ಗಾತ್ರ

ನವದೆಹಲಿ: ಕಾವೇರಿ ನದಿ ನೀರು ವಿವಾದ ಸಂಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ ಸಂಸದರ ಸಭೆ ದೆಹಲಿಯಲ್ಲಿ ಇಂದು ಆರಂಭವಾಗಿದೆ.

ಜಲ ಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಸುಪ್ರೀಂ ಕೋರ್ಟ್ ವಕೀಲರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು, ರಾಜ್ಯದ ಹಿತ ಕಾಪಾಡುವ ದೃಷ್ಟಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ನಿರ್ಧಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ಕಾವೇರಿ ವ್ಯಾಪ್ತಿಯ ಶಾಸಕರು, ಸಚಿವರು, ಕಾನೂನು ತಂಡ ಉಪಸ್ಥಿತರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT