ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಮಲತಾಯಿ ಧೋರಣೆ: ಫೆ. 7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ– ಸಿಎಂ ಸಿದ್ದರಾಮಯ್ಯ

Published 5 ಫೆಬ್ರುವರಿ 2024, 8:05 IST
Last Updated 5 ಫೆಬ್ರುವರಿ 2024, 8:05 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆ, ಬರ ಪರಿಹಾರ ವಿತರಣೆ ಮಾಡುವಲ್ಲಿ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ವಿರೋಧಿಸಿ ಇದೇ 7 ರಂದು ದೆಹಲಿಯ ಜಂತರ್ ಮಂತರ್ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿ, ಇದರಲ್ಲಿ ರಾಜಕೀಯ ಇಲ್ಲ, ನಮ್ಮ ಹೋರಾಟ ಉತ್ತರ ಭಾರತದ ರಾಜ್ಯಗಳ ವಿರುದ್ಧವೂ ಅಲ್ಲ ಎಂದರು.

ಇದರಲ್ಲಿ ಎಲ್ಲ ಶಾಸಕರು, ವಿಧಾನಪರಿಷತ್, ಸಂಸದರು ಭಾಗವಹಿಸಲಿದ್ದಾರೆ. ಬಿಜೆಪಿಯವರೂ ಇದರಲ್ಲಿ ಭಾಗವಹಿಸಲಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಬಾಯೇ ಬರಲಿಲ್ಲ. ಅಶೋಕ ಅವರಿಗೆ ಏನೂ ಗೊತ್ತಿಲ್ಲ, 26 ಸಂಸದರು ಬಾಯೇ ಬಿಡುತ್ತಿಲ್ಲ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT