ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ.

ಈ ಬಾರಿ ಸಿಇಟಿಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿಗೆ ಹಾಜರಾಗಿದ್ದರು.

ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.

ದ್ವಿತೀಯ ಪಿಯು ಪರೀಕ್ಷೆ–1 ಮತ್ತು ಪರೀಕ್ಷೆ–2, ಸಿಬಿಎಸ್ಇ, ಐಸಿಎಸ್ಇ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕೆಇಎ ಪೂರ್ಣಗೊಳಿಸಿದೆ.

ಮಧ್ಯಾಹ್ನ 2 ಗಂಟೆ ನಂತರ ಪ್ರಾಧಿಕಾರದ ವೆಬ್ಸೈಟ್ನಲ್ಲಿ (https://cetonline.Karnataka.gov.in/ ಹಾಗೂ https://karresults.nic.in) ಫಲಿತಾಂಶದ ವಿವರಗಳು ಲಭ್ಯವಾಗಲಿವೆ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

ಎಂಜಿನಿಯರಿಂಗ್ ವಿಭಾಗ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಶೇ 99.06 ಅಂಕಗಳೊಂದಿಗೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಸಾತ್ವಿಕ್ ಬಿರಾದರ್ (ಶೇ 99.33) ಎರಡನೇ ರ್ಯಾಂಕ್ ಗಳಿಸಿದ್ದಾರೆ.

ಕೃಷಿ ವಿಭಾಗ: ಕೃಷಿ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಮತ್ತು ಸುಚಿತ್.ಪಿ. ಪ್ರಸಾದ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ನರ್ಸಿಂಗ್ ವಿಭಾಗ: ನರ್ಸಿಂಗ್ ವಿಭಾಗದಲ್ಲಿ ಯಲಹಂಕದ ನಾರಾಯಣ ಇ-ಟೆಕ್ನೋದ ಹರೀಶ್ ರಾಜ್ ಪ್ರಥಮ ಸ್ಥಾನ. ಹೆಚ್ಎಸ್ ಆರ್ ಲೇಔಟ್ನ ನ್ಯಾಷನಲ್ ಪಬ್ಲಿಕ್ಸ್ಕೂಲ್ ಆತ್ರೇಯ ದ್ವಿತೀಯ ಸ್ಥಾನ ಮತ್ತು ಮಂಗಳೂರಿನ ಶಾಪಲ್ ಶೆಟ್ಟಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಪಶುವೈದ್ಯಕೀಯ ವಿಭಾಗ: ಪಶುವೈದ್ಯಕೀಯ ವಿಭಾಗದಲ್ಲಿ ರಕ್ಷಿತಾ.ವಿ.ಪಿ ಪ್ರಥಮ ಸ್ಥಾನ, ನಂದನ್ ದ್ವಿತೀಯ ಸ್ಥಾನ, ಭುವನೇಶ್ವರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
.CET Results 2025: ಸಿಇಟಿ ಫಲಿತಾಂಶ ಇಂದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.