‘ದೆಹಲಿಯಲ್ಲಿ ಇದೇ 8ರಂದು ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆ ಕೆಲವು ತಾಂತ್ರಿಕ ಕಾರಣಗಳಿಂದ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ, ಅವರು ರಾಗ ಎಳೆಯುತ್ತಿದ್ದಾರೆ. ವಿರೋಧ ಪಕ್ಷದವರಿಗೆ ಸರಿಹೊಂದುವ ದಿನವನ್ನು ನಾನು ಮತ್ತು ಮುಖ್ಯಮಂತ್ರಿ ಚರ್ಚಿಸಿ ತೀರ್ಮಾನಿಸುತ್ತೇವೆ’ ಎಂದರು.