ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ
ಎಕ್ಸ್ ಪೋಸ್ಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಗುರಿ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ. ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಬರೆದುಕೊಂಡಿದ್ದಾರೆ.