ಬೆಂಗಳೂರು: ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ, ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ 'ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸದಂತೆ ಕೋರ್ಟ್ ರಕ್ಷಣೆ ನೀಡಿದರೆ ಇವತ್ತೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ' ಎಂದು ಅವರ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಭರವಸೆ ನೀಡಿದರು.
.ಮಹಿಳೆ ಅಪಹರಣ: ರೇವಣ್ಣ ವಿರುದ್ಧ ಎಫ್ಐಆರ್.
ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶನಿವಾರ ವಿಚಾರಣೆ ನಡೆಸಿದರು.
.ರೇವಣ್ಣ, ಪ್ರಜ್ವಲ್ಗೆ ಕ್ಲೀನ್ಚಿಟ್ ನೀಡಲು ಯತ್ನ: ಹೈಕೋರ್ಟ್ ವಕೀಲ ಬಾಲನ್.
ವಿಚಾರಣೆ ವೇಳೆ ರೇವಣ್ಣ ಪರ ಹೈಕೋರ್ಟ್ ನ ಹಿರಿಯ ವಕೀಲ ಮೂರ್ತಿ ಡಿ.ನಾಯಕ್ ಅವರು, ‘ಅರ್ಜಿದಾರ ರೇವಣ್ಣ ಅವರಿಗೆ ಜಾಮೀನು ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ‘ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಆಕ್ಷೇಪಣೆ ಸಲ್ಲಿಸಲು ಕಾಲಾವಾಕಾಶ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು.
.ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು.
ಇಂದೇ ಆಕ್ಷೇಪಣೆ ಸಲ್ಲಿಸಿ ಎಂದು ಸೂಚಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಮಧ್ಯಾಹಕ್ಕೆ ಮುಂದೂಡಿದ್ದಾರೆ. ಅರ್ಜಿದಾರ ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.
.ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಬಿಜೆಪಿಗೂ ಮುಜುಗರ: ಅರವಿಂದ ಲಿಂಬಾವಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.