ಹೊಸಪೇಟೆ (ವಿಜಯನಗರ): ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಬೆಳಿಗ್ಗೆ ಇಲ್ಲಿನ ತಮ್ಮ ಮನೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯ ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದರು. ಕತೆಗಳಲ್ಲದೆ, 10 ಸಂಶೋಧನಾ ಯೋಜನೆಗಳ ಭಾಗವಾಗಿ ಕೃತಿಗಳನ್ನು ರಚಿಸಿದ್ದಾರೆ.

ಪ್ರಬಲ ದಲಿತ ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗಿದ್ದರು.

ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದರು, ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು.

'ಬುಗುರಿ', 'ಮಣ್ಣು', 'ಅತ್ತೆ', 'ದೇವರ ದಾರಿ' ಅವರ ಪ್ರಮುಖ ಕಥಾಸಂಕಲನಗಳು. 'ಸೂರ್ಯನನ್ನು ಬಚ್ಚಿಡಬಹುದೇ' ಅವರ ಕವನ ಸಂಕಲನ.

ಮೊಗಳ್ಳಿ ಗಣೇಶ್ 1963ರ ಜುಲೈ 1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನ ಹಳ್ಳಿಯಲ್ಲಿ ಜನಿಸಿದರು. ಅವರು ಓದಿದ್ದು ಅರ್ಥಶಾಸ್ತ್ರ ಮತ್ತು ಜಾನಪದ. ಆದರೆ, ಅವರಲ್ಲಿ ಹರಿಯುತ್ತಿದ್ದುದು ಮಣ್ಣಿನ ವಾಸನೆಯುಕ್ತ ಸಾಹಿತ್ಯಪ್ರೀತಿ. ಅವರ ‘ಬುಗುರಿ’, ‘ನನ್ನಜ್ಜನಿಗೊಂದಾಸೆಯಿತ್ತು’, ‘ಒಂದು ಹಳೆಯ ಚಡ್ಡಿ’ ಇತ್ಯಾದಿ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಾಗಿ ಗುರುತಿಸಲ್ಪಟ್ಟಿವೆ.

‘ಪ್ರಜಾವಾಣಿ’ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅವರ ಕಥೆಗಳು ನಾಲ್ಕು ಬಾರಿ ಬಹುಮಾನ ಪಡೆದಿದ್ದವು. ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ ಮೊಗಳ್ಳಿ ಗಣೇಶ್ ಅವರು ಮೊದಲು ಬರೆಯಲು ಪ್ರಾರಂಭಿಸಿದ್ದು ಕವಿತೆಗಳನ್ನು. ಕಥೆಯಲ್ಲಿ ಹೇಳಿಕೊಳ್ಳಲಾಗದ ಸುಖದುಃಖಗಳನ್ನು ಕವಿತೆಯಲ್ಲಿ ಹೇಳುವುದು ಹೆಚ್ಚು ಸಲೀಸು, ಆಪ್ತ ಹಾಗೂ ಸುಖಕರ ಎನ್ನುವುದು ಅವರ ಮಾತು. ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಅವರ ಕಾವ್ಯ ಸಂಕಲನಗಳು.

‘ತೊಟ್ಟಿಲು’, ‘ಕಿರೀಟ’ ಅವರ ಕಾದಂಬರಿಗಳು. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಭಾಷಾಂತರಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.