ದೇವದಾಸಿ ಪದ್ಧತಿ ನಿರ್ಮೂಲನೆ, ಸೌಹಾರ್ದ ಸಹಕಾರಿ ತಿದ್ದುಪಡಿ, ಅಂತರ್ಜಲ ಬಳಕೆ ನಿಯಂತ್ರಣದ ಮಸೂದೆಯೂ ಸೇರಿ 17 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು.
ಸರ್ಕಾರಕ್ಕೆ 2 ವರ್ಷ ತುಂಬಿದ್ದು, ರಾಜ್ಯದಲ್ಲಿ ಇನ್ನೂ ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ. ಔಷಧಗಳ ಕೊರತೆ ಇದೆ. ಶೇ 60 ಕಮಿಷನ್ ವಸೂಲಿಗೆ ರಾಜ್ಯದ ಎಲ್ಲೆಡೆ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ.
–ಆರ್.ಅಶೋಕ, ವಿರೋಧಪಕ್ಷದ ನಾಯಕ
ಶಾಸಕರ ಅನುದಾನ ನೀಡಿಕೆಯಲ್ಲಿ ತಾರತಮ್ಯ ಆಗಿದೆ. ರಸಗೊಬ್ಬರ ಸಮಸ್ಯೆ, ಕಾಲ್ತುಳಿತ ಹಾಗೂ ಬೆಲೆ ಏರಿಕೆಯ ಬಗ್ಗೆ ಚರ್ಚೆ ಮಾಡುತ್ತೇವೆ.