ಪತ್ರದಲ್ಲಿ ಏನಿದೆ?
‘ಕಾಂಗ್ರೆಸ್‌ನಲ್ಲಿ 38 ಶಾಸಕರು ಹೊಸದಾಗಿ ಗೆದ್ದಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಸಿ.ಎಂ ಆಗಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರ ಪೈಕಿ ಕನಿಷ್ಠ 8 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
‘ಮೊದಲ ಬಾರಿಗೆ ಶಾಸಕರಾದವರಿಗೆ ಸಂಪುಟದಲ್ಲಿ ಅವಕಾಶ ನೀಡುವುದ ರಿಂದ ಯುವ ಮುಖಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ನಾವು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಕ್ಕೆ ಬದ್ಧರಾಗಿದ್ದೇವೆ. 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತಕ್ಕೆ ಬರಬೇಕಾಗಿದೆ. ಹೀಗಾಗಿ, ಸಂಪುಟದಲ್ಲಿ ಯುವ ಮುಖಗಳಿಗೆ ಅವಕಾಶ ನೀಡಬೇಕು’ ಎಂದು ಪ್ರತಿಪಾದಿಸಲಾಗಿದೆ.